ಉದಯವಾಹಿನಿ, ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 1999 ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಪಾಕಿಸ್ತಾನದ ವಿರುದ್ಧ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಗೆಲುವಿಗೆ ಸರ್ವೋಚ್ಚ ತ್ಯಾಗ ಮಾಡಿದ ಸೈನಿಕರಿಗೆ ಮೋದಿ ಗೌರವ ಸಲ್ಲಿಸಿದರು.
ಈ ದಿನವು ಭಾರತದ ಅಪ್ರತಿಮ ಯೋಧರ ಶೌರ್ಯವನ್ನು ಮುನ್ನೆಲೆಗೆ ತರುತ್ತದೆ, ಅವರು ಯಾವಾಗಲೂ ದೇಶದ ಜನರಿಗೆ ಸ್ಪೋರ್ತಿಯ ಮೂಲವಾಗಿ ಉಳಿಯುತ್ತಾರೆ ಎಂದು ಪ್ರಧಾನಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಜೈ ಹಿಂದ್ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿನಿ ವಿಡಿಯೋ ಚಿತ್ರೀಕರಣ ಪ್ರಕರಣ: ಸಂತ್ರಸ್ತರಿಗೆ ಶಾಸಕ ಯಶುಪಾಲ್ ಬೆಂಬಲ
1999ರಲ್ಲಿ ಲಡಾಖ್‍ನಲ್ಲಿ ರಹಸ್ಯವಾಗಿ ಆಕ್ರಮಿಸಿಕೊಂಡಿದ್ದ ಪಾಕಿಸ್ತಾನಿ ಪಡೆಗಳನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆಯು ಉಗ್ರ ಪ್ರತಿದಾ
ಳಿ ನಡೆಸಿತ್ತು. ಈ ಸಂದರ್ಭದಲ್ಲಿ ನಡೆದ ಘೋರ ಯುದ್ಧದಲ್ಲಿ ಭಾರತೀಯ ಸೈನಿಕರು ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದರು. ಆ ಯುದ್ಧದಲ್ಲಿ ಹುತಾತ್ಮರಾದ ಯೋಧರ ಸವಿ ನೆನಪಿಗಾಗಿ ಈ ದಿವಸವನ್ನು ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದೆ.
