ಉದಯವಾಹಿನಿ , ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ ಲ್ಯಾಂಡ್ ಲಾರ್ಡ್ ಸಿನಿಮಾ ತಂಡಕ್ಕೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ.
ಈ ಸಿನಿಮಾದಲ್ಲಿ ಸಾಮಾಜಿಕ ಕಳಕಳಿಯಿದೆ, ಈ ಕಾರಣದಿಂದ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಸಿಗಲಿದೆ. ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
“ಲ್ಯಾಂಡ್‌ಲಾರ್ಡ್’ ಸಿನಿಮಾವು ತೆರೆಗೆ ಬರುವುದಕ್ಕೂ ಮುನ್ನವೇ ವಿಜಯ್, ನಿರ್ದೇಶಕ ಜಡೇಶ್ ಕೆ ಹಂಪಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದರು. ತಮ್ಮ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದರು. ಇದೀಗ ರಾಜ್ಯ ಸರ್ಕಾರವು ತೆರಿಗೆ ವಿನಾಯಿತಿ ಘೋಷಿಸಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಇದರಿಂದ ನಿರ್ಮಾಪಕರಿಗೆ ಆರ್ಥಿಕ ಲಾಭವಾಗುತ್ತದೆ. ಸಾಮಾನ್ಯವಾಗಿ ಸಿನಿಮಾದ ಟಿಕೆಟ್ ಮೇಲೆ 12% ಅಥವಾ 18% ಜಿಎಸ್‌ಟಿ ಇರುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ಅರ್ಧದಷ್ಟಿರುತ್ತದೆ. ಸರ್ಕಾರ ತೆರಿಗೆ ವಿನಾಯಿತಿ ನೀಡಿದರೆ, ಟಿಕೆಟ್ ಬೆಲೆ ಕಡಿಮೆಯಾಗುತ್ತದೆ. ಇದರಿಂದ ಸಾಮಾನ್ಯ ಪ್ರೇಕ್ಷಕರಿಗೆ ಕಡಿಮೆ ದರದಲ್ಲಿ ಸಿನಿಮಾ ನೋಡುವ ಅವಕಾಶ ಸಿಗುತ್ತದೆ. ಟಿಕೆಟ್ ದರ ಕಡಿಮೆಯಾದರೆ, ಸಹಜವಾಗಿಯೇ ಹೆಚ್ಚು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ.
