ಉದಯವಾಹಿನಿ : ಮುಂಬರುವ 2026ರ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಹಿನ್ನಡೆಯನ್ನು ಅನುಭವಿಸಿದೆ. ವಿದೇಶಿ ನೆಲದಲ್ಲಿ ಪಾಕಿಸ್ತಾನದ ವಿರುದ್ಧ ಆಡಿದ ಸರಣಿಯಲ್ಲಿ ಆಸ್ಟ್ರೇಲಿಯಾ 0–3 ಅಂತರದಿಂದ ಸಂಪೂರ್ಣ ವೈಟ್‌ವಾಷ್‌ ಆಘಾತ ಅನುಭವಿಸಿತು. ಅದರಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಕ್ರಮವಾಗಿ 108 ರನ್‌ ಹಾಗೂ 96 ರನ್‌ಗಳಿಗೆ ಆಲ್‌ಔಟ್‌ ಆಗಿ ಹೀನಾಯ ಸೋಲು ಅನುಭವಿಸಿತ್ತು.
ಈ ಸೋಲುಗಳು ನಿಧಾನ ಹಾಗೂ ಕಡಿಮೆ ಬೌನ್ಸ್ ಹೊಂದಿರುವ ಉಪಖಂಡದ ಪಿಚ್‌ಗಳಲ್ಲಿ ಆಸ್ಟ್ರೇಲಿಯಾದ ದೌರ್ಬಲ್ಯ ಮತ್ತು ಸಂಕಷ್ಟಗಳನ್ನು ಮತ್ತೊಮ್ಮೆ ಬಹಿರಂಗಪಡಿಸಿವೆ. ಮೊಹಮ್ಮದ್ ನವಾಜ್, ಉಸ್ಮಾನ್ ತಾರಿಕ್ ಮತ್ತು ಅಬ್ರಾರ್ ಅಹ್ಮದ್ ಅವರು ಆಸ್ಟ್ರೇಲಿಯಾದ ಬ್ಯಾಟಿಂಗ್ ಕ್ರಮವನ್ನು ಸಂಪೂರ್ಣವಾಗಿ ಉರುಳಿದರು. ಮೂರು ಪಂದ್ಯಗಳಲ್ಲಿಯೂ ಪ್ರವಾಸಿ ತಂಡದ ಬ್ಯಾಟ್ಸ್‌ಮನ್‌ಗಳು ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ವಿಫಲವಾದರು. ಜಾಗತಿಕ ಟೂರ್ನಿಗೆ ಇನ್ನೂ ಕೆಲವೇ ವಾರಗಳು ಬಾಕಿ ಇರುವ ವೇಳೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಸಮತೋಲನ ಮತ್ತು ಸಿದ್ಧತೆ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಭಾರೀ ಸೋಲುಗಳ ಹೊರತಾಗಿಯೂ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಫಲಿತಾಂಶದ ಮಹತ್ವವನ್ನು ಬಿಟ್ಟು, 2026ರ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್ ತಲುಪಲು ವಿಷಯದಲ್ಲಿ ತಮ್ಮ ತಂಡವನ್ನು ಬೆಂಬಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!