ಉದಯವಾಹಿನಿ, ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಇವತ್ತು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ. ಮನಸೋಇಚ್ಛೆ ಲಿಕ್ಕರ್ ಲೈಸನ್ಸ್‌ಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರದ ನೀತಿಯ ಪರಿಣಾಮವಾಗಿ 500 ಮೀಟರ್‌ಗೆ ಒಂದರಂತೆ ಲಿಕ್ಕರ್ ಅಂಗಡಿ ಸಿಗುವಂತಾಗಿದೆ. ಯಾವುದೇ ಇಲಾಖೆಯನ್ನು ತೆಗೆದುಕೊಂಡರೂ ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಎಂದು ಅದರ ಅಧ್ಯಕ್ಷರೂ ಬಹಿರಂಗವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.

Leave a Reply

Your email address will not be published. Required fields are marked *

error: Content is protected !!