ಉದಯವಾಹಿನಿ, ಕೋಲ್ಕತ್ತಾ: ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು ಬುಧವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಅದರ ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೇಪಾಳಿ ರಾಜಧಾನಿ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
THY 727 ವಿಮಾನವು ಸ್ಥಳೀಯ ಸಮಯ 13:28 ಕ್ಕೆ ಟೇಕಾಫ್ ಆಯಿತು. ಹೊರಟ 4 ನಿಮಿಷಗಳಲ್ಲೇ ಸಮಸ್ಯೆ ಕಾಣಿಸಿಕೊಂಡಿತು. ಟೇಕಾಫ್ ಆದ ಕೂಡಲೇ ಬಲ ಇಂಜಿನ್‌ಗೆ ಬೆಂಕಿ ತಗುಲಿತು ಎಂದು ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಜನರಲ್ ಮ್ಯಾನೇಜರ್ ತೆಕನಾಥ್ ಸಿತೌಲಾ ತಿಳಿಸಿದ್ದಾರೆ.
ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಂತೆ ವಿಮಾನವನ್ನು ಸುಮಾರು 10 ನಿಮಿಷಗಳ ಕಾಲ ಹಾರಾಡಿಸಲಾಯಿತು. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸುಮಾರು 15 ನಿಮಿಷಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲಾಯಿತು.

ವಿಮಾನವು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇಳಿಯುವ ಮೊದಲು ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕ್ಯಾಪ್ಟನ್ ಕೋಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದರು. ವಿಮಾನದಲ್ಲಿ 236 ಪ್ರಯಾಣಿಕರು ಮತ್ತು ಸಿಬ್ಬಂದಿಯಿದ್ದರು.

 

Leave a Reply

Your email address will not be published. Required fields are marked *

error: Content is protected !!