ಉದಯವಾಹಿನಿ, ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಲಾಗಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಜಮ್ಮು-ಕಾಶ್ಮೀರ ಪೊಲೀಸರು ನೀಡಿದ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಸಿಐಎಫ್, ಡೆಲ್ಟಾ ಪಡೆಗಳು ಮತ್ತು ವೈಟ್ ನೈಟ್ ಕಾರ್ಪ್ಸ್ ಜಂಟಿ ಕಾರ್ಯಾಚರಣೆಯ ಯೋಜನೆ ರೂಪಿಸಿದ್ದವು. ಜೋಫರ್ ಅರಣ್ಯದ ಸಾಮಾನ್ಯ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಸಮನ್ವಯದೊಂದಿಗೆ ಈ ಯೋಜನೆ ಕಾರ್ಯಗತಗೊಂಡಿದೆ ಎಂದು ಸೇನೆ ತಿಳಿಸಿದೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸೇನಾಧಿಕಾರಿಗಳು, ಹತರಾದ ಉಗ್ರರಲ್ಲಿ ಒಬ್ಬ ಉನ್ನತ ಜೈಶ್ ಕಮಾಂಡ್ ಆಗಿದ್ದು, ಆತನ ವಿವರ ಇನ್ನಷ್ಟೇ ಬಹಿರಂಗವಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.
