ಉದಯವಾಹಿನಿ, ಇಂದಿನ ಜಗತ್ತಿನಲ್ಲಿ ಬಹುತೇಕರು ಬೇಗ ನಿವೃತ್ತಿ ಹೊಂದಿ, ಆರಾಮದಾಯಕ ಜೀವನ ನಡೆಸಲು ಬಯಸುತ್ತಾರೆ. ಆದರೆ, ಸಾಧನೆಗೆ ವಯಸ್ಸಿಲ್ಲ ಎಂಬುವುದನ್ನು ನಟ ಜಗ್ಗೇಶ್ ಅವರ ಪತ್ನಿ ಪರಿಮಳಾ ಅವರು ತೋರಿಸಿಕೊಟ್ಟಿದ್ದಾರೆ.
ಪರಿಮಳಾ ಜಗ್ಗೇಶ್ ಅವರಿಗೆ ಈಗ 57 ವರ್ಷ ವಯಸ್ಸು, ಅವರು ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ವಯಸ್ಸು ಕೇವಲ ಮನುಷ್ಯನ ಮನಸ್ಸಿನ ಮಿತಿಯಷ್ಟೇ ಹೊರತು ಸಾಧನೆಯ ಹಾದಿಗಲ್ಲ ಎಂಬುದನ್ನು ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ (KSRA) ವತಿಯಿಂದ ಬೆಂಗಳೂರಿನ ‘ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ’ (SAI) ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 13ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್‌ ಸ್ಪರ್ಧೆ ಮತ್ತು ಚಾಂಪಿಯನ್‌ಶಿಪ್-2026 ರಲ್ಲಿ ಪರಿಮಳಾ ಜಗ್ಗೇಶ್ 10 ಮೀಟರ್ ಏರ್ ಪಿಸ್ತೂಲ್ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಅವರು ಸ್ಪರ್ಧಿಸಿದರು. ಮಾಸ್ಟರ್ ವಿಮೆನ್ ಇಂಡಿವಿಜುವಲ್ ವಿಭಾಗದಲ್ಲಿ 342-4x ಸ್ಕೋರ್ ಮಾಡುವ ಮೂಲಕ ಬೆಳ್ಳಿ ಪದಕ ಗೆದ್ದರು.

Leave a Reply

Your email address will not be published. Required fields are marked *

error: Content is protected !!