ಉದಯವಾಹಿನಿ, ಐಸಿಸಿ ಪುರುಷರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ಗಮನಾರ್ಹ ಏರಿಕೆಯನ್ನು ಕಂಡಿದ್ದಾರೆ. ಅವರು 32 ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 32ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಅವರು ಸದ್ಯ ಪಾಯಿಂಟ್ಸ್ ಟೇಬಲ್‌ನಲ್ಲಿ 584 ಅಂಕಗಳನ್ನು ಹೊಂದಿದ್ದಾರೆ.

ಇನ್ನು ಪಾಕಿಸ್ತಾನ ತಂಡದ ಆಲ್‌ರೌಂಡರ್ ಸೈಯಮ್ ಆಯುಬ್ ಅವರು ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರು ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಅವರು ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಶ್ರೀಲಂಕಾ ಆರಂಭಿಕ ಬ್ಯಾಟ್ಸ್‌ಮನ್ ಪಥುಮ್ ನಿಸಾಂಕ ಅವರು ಐದನೇ ಸ್ಥಾನಕ್ಕೆ ಬಂದಿದ್ದಾರೆ. ಭಾರತ ತಂಡದ ನಾಯಕ ಸೂರ್ಯಕುಮಾ‌ರ್ ಯಾದವ್ ಅವರು ಆರನೇ ಸ್ಥಾನಕ್ಕೆ ಬಂದಿದ್ದರೆ, ನ್ಯೂಜಿಲೆಂಡ್ ಆರಂಭಿಕ ಟಿಮ್ ಸೀಫರ್ಟ್ ಅವರು 9ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!