ಉದಯವಾಹಿನಿ, ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧರಿಸಿದ್ದು, ಇದು ಕ್ರಿಕೆಟ್ ಲೋಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರ ‘ಹೌದು’ ಎಂದಿದ್ದರೂ, ಇದರ ಪರಿಣಾಮಗಳು ಈ ಬಾರಿ ಗಂಭೀರವಾಗಿರುವ ಸಾಧ್ಯತೆಯಿದೆ.
ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ ಪಂದ್ಯಗಳು ಬಹಿಷ್ಕಾರಕ್ಕೊಳಗಾಗಿರುವುದು ಇದೇ ಮೊದಲೇನಲ್ಲ. ಹಿಂದೆ ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಬೇರೆ ಬೇರೆ ಕಾರಣಗಳಿಗಾಗಿ ಪಂದ್ಯವಾಡಲು ನಿರಾಕರಿಸಿದ್ದವು. ಈ ಹಿಂದೆ ಇಂತಹ ನಿರ್ಧಾರ ತೆಗೆದುಕೊಂಡ ತಂಡಗಳ ವಿರುದ್ಧ ಐಸಿಸಿ ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡಿರಲಿಲ್ಲ. ಇದೇ ಹಳೆಯ ಇತಿಹಾಸವನ್ನು ಮುಂದಿಟ್ಟುಕೊಂಡು ಪಾಕಿಸ್ತಾನ ಈಗ ಹಠಕ್ಕೆ ಬಿದ್ದಂತಿದೆ.
ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವೆಂದರೆ ಅದು ಕೇವಲ ಆಟವಲ್ಲ, ಅದೊಂದು ದೊಡ್ಡ ಆರ್ಥಿಕ ಮಾರುಕಟ್ಟೆ, ಈ ಪಂದ್ಯ ನಡೆಯದೇ ಇದ್ದರೆ ಐಸಿಸಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಲಿದೆ. ಹೀಗಾಗಿ, ಹಿಂದಿನ ಉದಾಹರಣೆಗಳನ್ನು ನೋಡಿ ಸುಮ್ಮನಿರಲು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸಿದ್ಧವಿಲ್ಲ.

Leave a Reply

Your email address will not be published. Required fields are marked *

error: Content is protected !!