ಉದಯವಾಹಿನಿ,: ಸಕ್ರಿಯ ರಾಜಕೀಯದಲ್ಲಿದ್ದರೂ ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ ಸಿನಿಮಾ ಪಯಣ ಇನ್ನೂ ನಿಂತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹುದ್ದೆ ಹೊತ್ತ ಬಳಿಕವೂ ಅವರ ನಟನೆಯ ಚಿತ್ರಗಳು ಒಂದರ ನಂತರ ಒಂದಾಗಿ ತೆರೆಗೆ ಬರುತ್ತಿವೆ. ಇದೀಗ ಪವನ್ ಅಭಿನಯದ ಹೊಸ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.
ಡಿಸಿಎಂ ಆಗಿದ ನಂತರ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಬಳಿಕ ಬಿಡುಗಡೆಯಾದ ‘ಓಜಿ’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿತು. ಇದೀಗ ಅದೇ ಹಾದಿಯಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 23ರಂದು ಪ್ರೇಕ್ಷಕರ ಮುಂದೆ ಬರಲಿದೆ ಎಂದು ನಿರ್ದೇಶಕ ಹರೀಶ್ ಶಂಕರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!