ಉದಯವಾಹಿನಿ ಕುಶಾಲನಗರ :-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಯ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸ್ಥಳೀಯ ತಹಶೀಲ್ದಾರರು ಇತರರು ಇದ್ದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಳೆ ಹಾನಿ ಪ್ರದೇಶವಾದ ಕುಶಾಲನಗರ ಸಾಯಿ ಮತ್ತು ಕುವೆಂಪು ಬಡಾವಣೆಗೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲಿನ ಕುಟುಂಬದವರ ಅಹವಾಲು ಆಲಿಸಿದರು.ಬಳಿಕ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಸಂತ್ರಸ್ತರ ಅಹವಾಲು ಆಲಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ನದಿ ಬಳಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಜೊತೆಗೆ ಮರಳು ತೆಗೆಯಬೇಕು ಎಂದು ಮನವಿ ಮಾಡಿದ್ದಾರೆ. ಆ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ನಂತರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಚೇರಂಬಾಣೆ ಮತ್ತು ಭಾಗಮಂಡಲಕ್ಕೆ ಜಂಟಿಯಾಗಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲಿನ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪ್ರಾಕೃತಿಕ ವಿಕೋಪ ವಿಭಾಗದ ಆಯುಕ್ತರಾದ ಸುನಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಹಾರಂಗಿ ಇಇ ಪುಟ್ಟಸ್ವಾಮಿ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ತಹಶೀಲ್ದಾರರಾದ ಪ್ರಕಾಶ್, ಕಿರಣ್ ಗೌರಯ್ಯ, ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!