ಉದಯವಾಹಿನಿ, ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಬೆಡ್ ರೂಮ್ ಖಾಸಗಿ ಕ್ಷಣಗಳನ್ನ ಸೆರೆ ಹಿಡಿದು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಪತ್ರಕರ್ತರನ್ನ ಬೆಳಗಾವಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮನೆಗೆ ನುಗ್ಗಿ ಬೆಡ್ ರೂಮ್ ನಲ್ಲಿದ್ದ ಲೈಟಿಂಗ್ ವೋಲ್ಟರ್‌ಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದ ಕಿರಾತಕರು ಖಾಸಗಿ ದೃಶ್ಯ ಸೆರೆಯಾದ ಬಳಿಕ ಮಹಿಳಾ ಅಧಿಕಾರಿಗೆ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು .ಹಣ ಕೊಡದಿದ್ದರೇ ಸೋಷಿಯಲ್ ಮಿಡಿಯಾದಲ್ಲಿ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿದ್ದರು. ನಕಲಿ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಮೀಷನರ್ ಮೊರೆಯನ್ನ ಮಹಿಳಾ ಅಧಿಕಾರಿ ಹೋಗಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಮೂವರು ನಕಲಿ ಪತ್ರಕರ್ತರನ್ನ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಹಡೆಮುರಿಕಟ್ಟಿದ್ದಾರೆ.
ಗೋಕಾಕ್ ನಗರದ ಜಲಾಲ್ ಗಲ್ಲಿಯ ಸಮೀರ್ ನಿಸಾರ್ ಅಹ್ಮದ್ ಶೇಖ್, ಗೋಕಾಕ್ ಹೊರವಲಯದ ಯೋಗಿಕೊಳ್ಳದ ಅಬ್ಬುಲ್‌ರಶೀದ್ ಮಕಾಂದಾರ್, ಘಟಪ್ರಭಾ ನಿವಾಸಿ ಮೊಹಮ್ಮದ್ ದಿಲಾವರ್ ಬಾಲೇಕುಂದ್ರಿ ಬಂಧಿತರು ಎಂದು ಗುರುತಿಸಲಾಗಿದೆ
