ಉದಯವಾಹಿನಿ, ಮಂಗಳೂರು: ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ ಸುಳ್ಳು ಹೇಳ್ತಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ್ದು ಕೇವಲ 20% ಅಂತಾರೆ. ರಾಜ್ಯ ಸರ್ಕಾರ ಹೆಚ್ಚಿನ ಹಣ ಹಾಕುವಾಗ, ಕೇಂದ್ರ ಸರ್ಕಾರದ ಮೇಲೆ ಏಕೆ ದೂಷಿಸುತ್ತಿದ್ದಾರೆ? ದರ ನಿಗದಿ ಮಾಡೋದು ಯಾರು? ಕೇಂದ್ರ ಸರ್ಕಾರದ ಮೇಲೆ ಹಾಕುವ ಚಾಳಿ ಅವರಿಗೆ. ಬೇರೆ ರಾಜ್ಯಗಳಲ್ಲಿ ಯಾಕೆ ದರ ಏರಿಕೆ ಆಗ್ತಿಲ್ಲ? ಇಲ್ಲಿ ನಮ್ಮದು ಹೆಚ್ಚಿನ ಪಾಲು ಅಂದ ಮೇಲೆ ಅಧಿಕಾರ ಯಾರಿಗೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!