ಉದಯವಾಹಿನಿ, ಕಠ್ಮಂಡು: ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ಭೀಕರ ಬಸ್ ಅಪಘಾತ (Accident) ಸಂಭವಿಸಿತ್ತು. ಮದುವೆಗೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಉರುಳಿತ್ತು. ಈ ಅಪಘಾತದ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 34 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಮಾಹಿತಿ ತಿಳಿದ ಕೂಡಲೇ ನೇಪಾಳದ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಬೈತಾಡಿ ಮತ್ತು ದಾದೇಲ್ಧುರಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ವರದಿಗಳ ಪ್ರಕಾರ, ನೇಪಾಳದ ಸುದುರ್ಪಾಶ್ಚಿಮ್ ಪ್ರದೇಶದಲ್ಲಿ  ಅಪಘಾತ ಸಂಭವಿಸಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಚಿಕಿತ್ಸೆಯ ಸಮಯದಲ್ಲಿ 5 ಜನರು ಸಾವನ್ನಪ್ಪಿದರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೆ ಏರಿದೆ. ಬೈತಾಡಿ ಜಿಲ್ಲೆಯ ಪುರ್ಚೌರಿ ಪುರಸಭೆ ಪ್ರದೇಶದಿಂದ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಪರ್ವತದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಬಿದ್ದಾಗ ಈ ಅಪಘಾತ ಸಂಭವಿಸಿದೆ. ಪಶ್ಚಿಮ ನೇಪಾಳದ ಪುರ್ಚೌರಿ -7 ಪ್ರದೇಶದ ಬದ್ಗಾಂವ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!