ಉದಯವಾಹಿನಿ, ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಮತ್ತು ಭದ್ರತಾ ಸಂಬಂಧಗಳನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ. ಹಾಗೇ ಆರ್ಥಿಕ ಮತ್ತು ನಾವೀನ್ಯತೆ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇದು ಆಗ್ನಿಯ ಏಷ್ಯಾದ ರಾಷ್ಟ್ರಕ್ಕೆ ಅವರ ಮೂರನೇ ಭೇಟಿಯಾಗಿದ್ದು, 2024ರ ಆಗಸ್ಟ್‌ನಲ್ಲಿ ಭಾರತ -ಮಲೇಷ್ಯಾ ದ್ವಿಪಕ್ಷೀಯ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಹೆಚ್ಚಿಸಿದ ಬಳಿಕ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

Leave a Reply

Your email address will not be published. Required fields are marked *

error: Content is protected !!