ಉದಯವಾಹಿನಿ, ನಿರ್ದೇಶಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಕನಕಪುರದ ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ಫಿಲಂ ಚೇಂಬರ್ ಗೆ ನಟ, ನಿರ್ದೇಶಕ ಜೋಗಿ ಪ್ರೇಮ್ ದೂರು ಕೊಟ್ಟಿದ್ದಾರೆ.
ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿಕೆಗೆ ಜೋಗಿ ಪ್ರೇಮ್ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಕಾಟನ್ ಪೇಟೆ ಚಿತ್ರದ ಆಡಿಯೋ ಲಾಂಚ್ ಸಂದರ್ಭದಲ್ಲಿ ನಿರ್ದೇಶಕ ನಟ ನಟಿಯರ ಮೇಲೆ ನಿರ್ಮಾಪಕ ಕನಕಪುರ ಶ್ರೀನಿವಾಸ ಬಹಿರಂಗ ವೇದಿಕೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಕನಕಪುರ ಶ್ರೀನಿವಾಸ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೆಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!