ಉದಯವಾಹಿನಿ, ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿನಟ ಅವರ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಲಾಗಿದೆ. ‘ಸರ್ಕಾರಿ ಶಾಲೆ H8’ ಚಿತ್ರದಲ್ಲಿ ಗಿಲ್ಲಿ ನಟ ಅವರು ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಅದಕ್ಕಾಗಿ ಕೇಳಿದಷ್ಟು ಸಂಭಾವನೆಯನ್ನು ನಿರ್ಮಾಪಕರು ನೀಡಿದ್ದೆವು. ಆದರೆ, ಗಿಲ್ಲಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸದೆ ಗಿಲ್ಲಿ ನಟ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ನಿರ್ಮಾಪಕರು ಗಂಭೀರ ಆರೋಪ ಮಾಡಿದ್ದಾರೆ.
ಗಿಲ್ಲಿ ನಟ ಅಸಹಕಾರ ತೋರುತ್ತಿದ್ದಾರೆ ಎಂದು ಆರೋಪಿಸಿ, ನಿರ್ಮಾಪಕರು ನ್ಯಾಯ ಕೋರಿ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ. ದೂರು ಸ್ವೀಕರಿಸಿರುವ ಮಂಡಳಿಯು ಈ ಬಗ್ಗೆ ನಟ ಗಿಲ್ಲಿ ಅವರನ್ನು ಸಂಪರ್ಕಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
