ಉದಯವಾಹಿನಿ, ಇಂದಿನಿಂದ ಟಿ20 ವಿಶ್ವಕಪ್‌ನ ರೋಚಕ ಕದನಕ್ಕೆ ಚಾಲನೆ ಸಿಗುತ್ತಿದೆ. ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲು ಸಜ್ಜಾಗಿ ನಿಂತಿವೆ. ಆದರೆ, ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ದೊಡ್ಡ ಆಘಾತ ಎದುರಾಗಿದೆ. ತಂಡದ ಬೆನ್ನೆಲುಬಾಗಿದ್ದ ಇಬ್ಬರು ಸ್ಟಾರ್ ವೇಗಿಗಳು ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.
ಆಸೀಸ್ ಪಡೆಯ ಪ್ರಮುಖ ಬೌಲಿಂಗ್ ಅಸ್ತ್ರ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳದ ಕಾರಣ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಕಳೆದ ಕೆಲವು ತಿಂಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಹೇಝಲ್‌ವುಡ್‌ ಸಂಪೂರ್ಣ ಫಿಟ್ ಆಗದ ಕಾರಣ ವಿಶ್ವಕಪ್‌ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಈಗಾಗಲೇ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಈ ಬಾರಿ ತಂಡದಲ್ಲಿಲ್ಲ.
ವಿಶ್ವದ ಯಾವುದೇ ಬ್ಯಾಟಿಂಗ್ ಪಡೆಯನ್ನು ನಡುಗಿಸುವ ಶಕ್ತಿ ಹೊಂದಿದ್ದ ಕಮಿನ್ಸ್ ಹೇಝಲ್‌ವುಡ್ ಮತ್ತು ಸ್ಟಾರ್ಕ್ ಇಲ್ಲದೆ ಆಸ್ಟ್ರೇಲಿಯಾ ಈ ಬಾರಿ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುತ್ತಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮತ್ತು ಆತಂಕ ಎರಡನ್ನೂ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!