ಉದಯವಾಹಿನಿ, ಬೆಂಗಳೂರು: ನಮ್ಮ ಮೆಟ್ರೋ ದರ ನಾಳೆ ಏರಿಕೆಯಾಗುತ್ತಾ? ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಅಧಿಕೃತ ಉತ್ತರ ಸಿಕ್ಕಿಲ್ಲ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಸೋಮವಾರದಿಂದ ದರ ಏರಿಕೆ ಇರುವುದಿಲ್ಲ. ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಈ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಹೇಳಿದರೂ ಇಲ್ಲಿಯವರೆಗೆ ಕೇಂದ್ರದಿಂದ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ಗೆ ಯಾವುದೇ ಅಧಿಕೃತ ಪತ್ರ ಬಂದಿಲ್ಲ. ಅಧಿಕೃತ ಪತ್ರ ಬಂದರಷ್ಟೇ ದರ ಇಳಿಕೆಯಾಗಲಿದೆ. ಇಲ್ಲಿಯವರೆಗೆ ಯಾವುದೇ ಅಧಿಕೃದ ಆದೇಶದ ಪತ್ರ ಬಾರದೇ ಇದ್ದರೆ ದರ ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬಿಎಂಆರ್‌ಸಿಎಲ್‌ ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ.
ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹೆಚ್ಚಳವಾಗಲಿದೆ. ಕನಿಷ್ಠ 10 ಇರುವ ದರ 11ಕ್ಕೆ, ಗರಿಷ್ಠ 90 ಇರುವ ದರ 95ಕ್ಕೆ ಏರಿಕೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!