ಉದಯವಾಹಿನಿ, ಬೆಂಗಳೂರು, : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್​​ ವಜಾ‌ಗೊಳಿಸಿದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕನಿಗೆ ಬಂಧನ ಭೀತಿ ಎದುರಾಗಿದೆ.
ಶಾಸಕ ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.

2025ರ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ರೌಡಿಶೀಟರ್‌ ಬಿಕ್ಲುಶಿವನ ಕೊಲೆ ಪ್ರಕರಣದಲ್ಲಿ ಆರೋಪಿ ರೌಡಿ ಜಗದೀಶ್‌ ಅಲಿಯಾಸ್‌ ಜಗ್ಗ, ಶಾಸಕ ಬೈರತಿ ಬಸವರಾಜ್‌ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಅಲ್ಲದೇ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಜಾಮೀನು ಅರ್ಜಿ ನಿರಾಕರಣೆಗೊಂಡ ಬಳಿಕ,​ ಹೈಕೋರ್ಟ್‌ನಿಂದ ಬೈರತಿ ಬಸವರಾಜ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಆದರೆ, ಇದೀಗ ಹೈಕೋರ್ಟ್​ ನಿರೀಕ್ಷಣಾ ಜಾಮೀನು ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಶಾಸಕನಿಗೆ ಬಂಧನ ಭೀತಿ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!