ಉದಯವಾಹಿನಿ, ಬೆಂಗಳೂರು: ಮಗಳೇ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ತೆಗೆದು ಲವ್ವರ್‌ಗೆ ಕಳುಹಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್‌ ಬಯಲಾಗಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ತಾಯಿಯೇ ತನ್ನ ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ದೂರು ನೀಡಿದ್ದರು. ತಮ್ಮ ಹಾಗೂ ತಮ್ಮ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಿದ್ದರು. ದೂರು ನೀಡುತ್ತಿದ್ದಂತೆ ಪೊಲೀಸರು 23 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಖಾಸಗಿ ಫೋಟೋ ತೆಗೆದಿದ್ಯಾಕೆ ಎಂಬುವುದು ಬಯಲಾಗಿದೆ. ಕುಟುಂಬಸ್ಥರು ಮದುವೆಗೆ ಒಪ್ಪದಿದ್ದರೆ ಈ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವಂತೆ ಯುವತಿಗೆ ತಿಳಿಸಿದ್ದಾಗಿ ಪ್ರಿಯಕರ ಸತ್ಯ ಬಾಯ್ಬಿಟ್ಟಿದ್ದಾನೆ.

ಯುವತಿ ಓರ್ವ ಯುವಕನನ್ನು ಪ್ರೀತಿಸುತ್ತಿದ್ದಳು. ಮದುವೆಯೂ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಈ ವಿಚಾರ ತಿಳಿದ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಬೇಸರಗೊಂಡ ಯುವತಿ ಪ್ರಿಯಕರನ ಜೊತೆಗೆ ಚರ್ಚಿದ್ದಳು. ಈ ವೇಳೆ ಖಾಸಗಿ ಫೋಟೋ ತೆಗೆದು ಇಟ್ಕೋ, ಮದುವೆಗೆ ಒಪ್ಪದೇ ಇದ್ದಾಗ ಅದನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡೋಣ ಎಂದು ತಿಳಿಸಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!