ಉದಯವಾಹಿನಿ, ರಾಂಚಿ: ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸಿಪಿಐ(ಎಂ) ನಾಯಕರೊಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸುಭಾಷ್ ಮುಂಡಾ ಮೃತ ಸಿಪಿಐ(ಎಂ) ಮುಖಂಡ ಎಂದು ಗುರುತಿಸಲಾಗಿದೆ. ರಾಂಚಿಯ ದಲದಾಲಿ ಚೌಕ್‌ನಲ್ಲಿರುವ ಅವರ ಕಚೇರಿಯಲ್ಲಿ ರಾತ್ರಿ 7 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ.ಘಟನೆಯ ನಂತರ, ಕ್ರೋಧಗೊಂಡ ಸ್ಥಳೀಯರು ಸ್ಥಳದಲ್ಲಿದ್ದ ಅಂಗಡಿಗಳನ್ನು ಧ್ವಂಸಗೊಳಿಸಿ, ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಡಾ ಅವರು ಹಟಿಯಾ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಮಂದರ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಹತ್ಯೆಯ ವಿರುದ್ಧ ಪ್ರತಿಭಟನೆ ಮಧ್ಯರಾತ್ರಿಯವರೆಗೂ ಮುಂದುವರೆದಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!