ಉದಯವಾಹಿನಿ, ಮೈಸೂರು: ಬೇಸಿಗೆ ಪ್ರಾರಂಭವಾಗುವ ಮುನ್ನವೆ ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ.‌
ಕಳೆದ ಆರೇಳು ತಿಂಗಳುಗಳಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ 6 ಮತ್ತು 7ನೇ ವಾರ್ಡ್​ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ – ಜಾನುವಾರು ಪರಿತಪಿಸುವಂತಾಗಿದೆ. ಕುಡಿವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸ್ಥಳೀರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಗ್ರಾಮದ ಮುಂಭಾಗದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕೂಡ ಹುಲ್ಲಹಳ್ಳಿ ಗ್ರಾಮದಲ್ಲಿ ಬೇಸಿಗೆಗೂ ಮುನ್ನ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ.‌ ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳ್ಯಾರು ಸ್ಪಂದಿಸುತ್ತಿಲ್ಲ ಎಂದು ಪಿಡಿಒ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಗ್ರಾಮ ಪಂಚಾಯಿತಿ ಒಳಗೆ ಪ್ರವೇಶ ಮಾಡದಂತೆ ದಿಗ್ಬಂಧನ ವಿಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು. ಗ್ರಾಮಸ್ಥ ಕಾಶಿ ಜವರನಾಯಕ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ಹಲವು ಗ್ರಾಮಸ್ಥರು ನೀರಿಗಾಗಿ ಮನವಿ ಮಾಡಿದ್ದಾರೆ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನೀರು, ಮೂಲ ಸೌಕರ್ಯಕ್ಕಾಗಿ ಸರ್ಕಾರದಿಂದ ಬರುವ ಹಣವನ್ನು ಅಧಿಕಾರಿಗಳು ಎಲ್ಲಿಗೆ ಬಳಸುತ್ತಾರೆಂದು ಕಿಡಿಕಾರಿದರು.

 

Leave a Reply

Your email address will not be published. Required fields are marked *

error: Content is protected !!