ಉದಯವಾಹಿನಿ, ಭೋಪಾಲ್‌:  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಧ್ಯಪ್ರದೇಶದ ಬಿಜೆಪಿ ಮುಖಂಡರ ಜೊತೆ ಬುಧವಾರ ತಡರಾತ್ರಿವರೆಗೂ ಮಹತ್ವದ ಮಾತುಕತೆ ನಡೆಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಅಮಿತ್‌ ಶಾ ಸ್ಥಳೀಯ ನಾಯಕರೊಂದಿಗೆ ಸುಮಾರು 3 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ವರಿದಿಯಾಗಿದೆ.
ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಷ್ಣು ದತ್ತಾ ಶರ್ಮಾ, ಕೇಂದ್ರ ಸಚಿವರಾದ ತೋಮರ್‌, ಸಿಂದಿಯಾ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ಕಳೆದ 15 ದಿನಗಳಲ್ಲಿ ಎರಡನೇ ಬಾರಿ ಸ್ಥಳೀಯ ಮುಖಂಡರ ಜತೆ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!