ಉದಯವಾಹಿನಿ, ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್​) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ.

ತಲ್ವಾರ್ ಬೀಸಿದ್ದರಿಂದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ಮಧ್ಯೆ ದುಷ್ಕರ್ಮಿ ಓರ್ವನ ಮೊಬೈಲ್ ಹಾಗೂ ದುಡ್ಡನ್ನು ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಶಿವಮೊಗ್ಗ ಟೌನ್ ರೈಲು ಸ್ಟೇಷನ್​ನಿಂದ ಕೇವಲ 1 ಕಿಲೋಮೀಟರ್ ದೂರದಲ್ಲಿರುವ ಈ ನಿಲ್ದಾಣದಲ್ಲಿ ಘಟನೆ ನಡೆದಿದೆ. ರೈಲಿನಲ್ಲಿ ನಡೆದ ದರೋಡೆ ಯತ್ನ ಮತ್ತು ಹಲ್ಲೆ ಪ್ರಕರಣವನ್ನು ರೈಲ್ವೇ ಇಲಾಖೆ ಅಧಿಕೃತವಾಗಿ ದೃಢಪಡಿಸಿದೆ.

Leave a Reply

Your email address will not be published. Required fields are marked *

error: Content is protected !!