ಉದಯವಾಹಿನಿ, ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಮೆಟ್ರೋ ರೆಡ್ ಲೈನ್‌ಗೆ ಹಾಗೂ ಡಬಲ್ ಡೆಕ್ಕರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಹೀಗಾಗಿ ನಮ್ಮ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಂಸದ ಪಿ.ಸಿ ಮೋಹನ್ , ಸರ್ಜಾಪುರ – ಹೆಬ್ಬಾಳ ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಯೋಜನೆ ಮತ್ತೆ ಮರುಪರಿಶೀಲನೆ ಮಾಡಲು ಸೂಚಿಸಲಾಗಿದೆ. 28,405 ಕೋಟಿ ರೂ. ಡಿಪಿಆರ್ ಹಿನ್ನೆಲೆ ಅನುಮೋದನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದರೆೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿದೆ. ಹಾಗಾಗಿ, ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಬೇಡ. ಆಯ್ದ ಜಂಕ್ಷನ್‌ಗಳಲ್ಲಿ ಡಬಲ್ ಡೆಕ್ಕರ್ ಮಾಡಬಹುದು ಎಂದು ಕೇಂದ್ರ ಸೂಚಿಸಿದೆ.
ರಾಜ್ಯ ಸರ್ಕಾರ ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲೂ ಡಬಲ್ ಡೆಕ್ಕರ್ ಫ್ಲೈ ಓವರ್ ಮಾಡಲು ಫ್ಲ್ಯಾನ್ ಮಾಡಿತ್ತು. ಈ ಹಿಂದೆ ಯೋಜನಾ ವೆಚ್ಚ ಹೆಚ್ಚಾಗಿದೆ ಎಂದು ಡಿಪಿಆರ್‌ನ್ನು ಕೇಂದ್ರ ಸರ್ಕಾರ ವಾಪಸ್ ಕಳಿಸಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಬ್ರೇಕ್ ಹಾಕಿದೆ.
