ಉದಯವಾಹಿನಿ, ವಾಷಿಂಗ್ಟನ್: ಮ
ಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ನಗ್ನ ಮೆರವಣಿಗೆ ಕೃತ್ಯದ ಬಗ್ಗೆ ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿದೆ. ‘ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದ ವಿಡಿಯೊ ನೋಡಿ ಆಘಾತವಾಗಿದೆ. ಭಾರತ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಯತ್ನಿಸಿರುವುದಕ್ಕೆ ನಮ್ಮ ಬೆಂಬಲವಿದೆ’ ಎಂದು ಅಧ್ಯಕ್ಷ ಜೋ ಬೈಡನ್ ಸರ್ಕಾರದ ಉಪ ವಕ್ತಾರ ವೇದಾಂತ್ ಪಟೇಲ್ ಒತ್ತಾಯಿಸಿದ್ದಾರೆ.ಮಣಿಪುರ ಹಿಂಸಾಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನದ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಅವರ ಗಮನಕ್ಕೂ ಈ ಪ್ರಕರಣ ಬಂದಿದೆ. ಮಹಿಳೆಯರ ಮೇಲೆ ನಡೆದ ಈ ಹೇಯಕೃತ್ಯದಿಂದ ನಾಗರಿಕ ಸಮಾಜಕ್ಕೆ ತಲೆತಗ್ಗಿಸುವಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
