ಉದಯವಾಹಿನಿ, ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರ ಚಿತ್ರಕ್ಕೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಟೀಸರ್‌ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತಿರುಗಿಬಿದ್ದಿದೆ. ಟಾಕ್ಸಿಕ್‌ ಸಿನಿಮಾ ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ, ಕ್ರೈಸ್ತರಿಗೆ ಮುಜುಗರ ತರಲಾಗಿದೆ ಎಂದು ಆರೋಪಿಸಿ, ನ್ಯಾಷನಲ್‌ ಕ್ರಿಶ್ಚಿಯನ್‌ ಫೆಡರೇಷನ್‌ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ನೀಡಿದೆ.
ಟಾಕ್ಸಿಕ್‌ ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಕಯೇಲ್‌ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್‌ಗಳನ್ನ ತೆಗೆಯಬೇಕು, ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಚಿತ್ರತಂಡ ಸಂತ ಮಿಕಯೇಲ್‌ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನ ತೆಗೆಯಬೇಕು. ಅಪಮಾನ ಮಾಡಿದ್ದಕ್ಕಾಗಿ ಕ್ರೈಸ್ತರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಪೋಸ್ಟ್‌ಗಳನ್ನ ತೆಗೆಯದಿದ್ದರೆ, ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!