ಉದಯವಾಹಿನಿ, 2017ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಈ ಬಗ್ಗೆ ಸಲ್ಲಿಸಿದ ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು, ಆರೋಪಗಳ ಬೆಂಬಲಕ್ಕೆ ಸ್ಪಷ್ಟವಾದ ಪ್ರಾಥಮಿಕ ಸಾಕ್ಷ್ಯಗಳಿಲ್ಲವೆಂದು ಹೇಳಿ ವಿಚಾರಣಾ ನ್ಯಾಯಾಲಯದಲ್ಲಿ ಮುಂದಿನ ಕ್ರಮಕ್ಕೆ ತಡೆ ನೀಡಿದರು.
ಆರೋಪಿಗಳ ಪರವಾಗಿ ವಕೀಲ ಎಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದರು. 2017ರ ಅಕ್ಟೋಬರ್ 20ರಂದು ಮೈಸೂರಿನ ಮಸಾಜ್ ಪಾರ್ಲ‌್ರಗೆ ಭೇಟಿ ನೀಡಿದ ವೇಳೆ ಇಬ್ಬರೂ ನಟರು ಲೈಂಗಿಕ ಕಿರುಕುಳ ನೀಡಿದರು ಎಂದು ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸರಸ್ವತಿಪುರಂ ಪೊಲೀಸರಿಗೆ ದೂರು ನೀಡಿದ್ದರು. ಆ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯವು ಇಬ್ಬರಿಗೂ ಸಮನ್ಸ್ ಜಾರಿ ಮಾಡಿತ್ತು.
