ಉದಯವಾಹಿನಿ, ರಾಯಚೂರು: ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಬೈಕ್‍ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿ ಬರೊಬ್ಬರಿ 15 ಅಡಿ ಎತ್ತರಕ್ಕೆ ಹಾರಿ ಬಿದ್ದಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.ನಗರದ ಸ್ಟೇಷನ್ ವೃತ್ತದಿಂದ ಅತೀವೇಗದಲ್ಲಿ ಬರುತ್ತಿದ್ದ ಕಾರು ರಸ್ತೆ ವಿಭಜಕದಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಶಿವರಾಜ್ ಪಾಟೀಲ್‍ಗೆ ಕಾಲು ಮುರಿತವಾಗಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಸ್ತೆ ಬದಿಯಲ್ಲಿ ತೆರಳುತ್ತಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರಲ್ಲಿ ಇಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯರಾದ ಜ್ಯೋತಿ ಹಾಗೂ ಶಿವಮಂಗಳಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಬೈಕ್ ಸವಾರ ಶಿವರಾಜ್ ಪಾಟೀಲ್ ಎಂಬುವವರಿಗೂ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಾದ ದೇವದುರ್ಗ ತಾಲೂಕು ಬೂಮನಗುಂಡ ತಾಲೂಕಿನ ಶಿವಮಂಗಳ ಹಾಗೂ ಸಿರವಾರ ತಾಲೂಕು ಬೇವಿನೂರು ಗ್ರಾಮದ ಜ್ಯೋತಿ ಎಂದು ಗುರುತಿಸಲಾಗಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಲಾಗಿದೆ.

Leave a Reply

Your email address will not be published. Required fields are marked *

error: Content is protected !!