ಉದಯವಾಹಿನಿ, ಇಸ್ಲಮಾಬಾದ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಚೆನಾಬ್ ನದಿಗೆ ಭಾರತ ನಿರ್ಮಿಸಲು ಯೋಜಿಸಿರುವ ಅಣೆಕಟ್ಟು ಯೋಜನೆಯನ್ನು ಪಾಕಿಸ್ತಾನ ವಿರೋಧಿಸಿದ್ದು ಭಾರತ ಅಂತಾರಾಷ್ಟ್ರೀಯ ಒಪ್ಪಂದದ ಬಾಧ್ಯತೆಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.
ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ ಬಳಿಕ ಭಾರತವು 5,129 ಕೋಟಿ ರೂ. ವೆಚ್ಚದ ಸಾವಳಕೋಟೆ ಜಲವಿದ್ಯುತ್ ಯೋಜನೆಯ ಕಾಮಗಾರಿ ಆರಂಭಿಸಿದೆ. ಇದು 1960ರ ಒಪ್ಪಂದದ ಉಲ್ಲಂಘನೆಯಾಗಿದ್ದು ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆಹಿಡಿಯುವ ಭಾರತದ ಕಾರ್ಯತಂತ್ರದ ಭಾಗವಾಗಿದೆ ಎಂದು ಪಾಕಿಸ್ತಾನ ಆರೋಪಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ನ್ಯೂಸ್18 ವರದಿ ಮಾಡಿದೆ. ಅಂತಾರಾಷ್ಟ್ರೀಯ ವ್ಯವಸ್ಥೆಯಾದ ಸಿಂಧೂ ಜಲ ಒಪ್ಪಂದಕ್ಕೆ ಎರಡೂ ಪಕ್ಷಗಳು ಬದ್ಧವಾಗಿರಬೇಕು ಮತ್ತು ಯಾವುದೇ ಏಕಪಕ್ಷೀಯ ಕ್ರಮಗಳು ಮತ್ತು ಧಿಕ್ಕಾರಗಳು ಈ ಕಾನೂನು ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ತಾಹಿರ್ ಅಂದ್ರಾಬಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!