ಉದಯವಾಹಿನಿ, ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.‌ ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಲ್ಹಾದ್‌ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!