ಉದಯವಾಹಿನಿ, ಕ್ಯಾಲಿಫೋರ್ನಿಯಾ : ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ.
22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬಕ್ಲೇðಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಫೆ.10ರಂದು ಕ್ಯಾಲಿಫೋರ್ನಿಯಾದ ಬಕ್ಲೇð ನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದರು. ಸದ್ಯ ವಿದ್ಯಾರ್ಥಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಸಾಕೇತ್‌ನ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೂತಾವಾಸ ಕಚೇರಿ ಹೇಳಿದೆ.
