ಉದಯವಾಹಿನಿ, ನವದೆಹಲಿ: ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ನ್‌ಪಿ) ಮುಖ್ಯಸ್ಥ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ. ಫೆಬ್ರವರಿ 17 ಮಂಗಳವಾರ ಈ ಸಮಾರಂಭ ನಡೆಯಲಿದ್ದು ಓಂ ಬಿರ್ಲಾ ಅವರ ಜೊತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ಭಾಗವಹಿಸಲಿದ್ದಾರೆ.
ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಮೋದಿ ಅವರಿಗ ಆಹ್ವಾನ ನೀಡಿದ್ದರು. ಆದರೆ ಫೆ.17 ರಂದು ಕೆಲವು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿರುವ ಕಾರಣ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.
ಢಾಕಾದಲ್ಲಿ ನಡೆಯಲಿರುವ ಸಮಾರಂಭಕ್ಕೆ ಹಲವು ದೇಶಗಳಿಗೆ ಆಹ್ವಾನ ನೀಡಲಾಗಿದೆ. ಚೀನಾ, ಸೌದಿ ಅರೇಬಿಯಾ, ಪಾಕಿಸ್ತಾನ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್ ದೇಶಗಳಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಪಕ್ಷ ತಿಳಿಸಿದೆ.
