ಉದಯವಾಹಿನಿ, ಮುಂಬೈ: ಇಲ್ಲಿನ ಮುಲುಂಡ್‌ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್‌ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಯೋಜನಾ ನಿರ್ದೇಶಕರು, ಗುತ್ತಿಗೆದಾರರು ಸೇರಿ ಐವರನ್ನ ಬಂಧಿಸಲಾಗಿದೆ. ಅಲ್ಲದೇ ಕಾರ್ಯನಿರ್ವಾಹಕ ಇಂಜಿನಿಯರ್‌ನನ್ನ ಅಮಾನತುಗೊಳಿಸಿದ್ದು, ಯೋಜನೆಯಲ್ಲಿ ಭಾಗಿಯಾಗಿರುವ ಗುತ್ತಿಗೆದಾರರು ಮತ್ತು ಸಲಹೆಗಾರರಿಗೆ 6 ಕೋಟಿ ದಂಡ ವಿಧಿಸಿದೆ.
ಯೋಜನಾ ನಿರ್ದೇಶಕ ಹರೀಶ್ ಚೌಹಾಣ್, ಇಬ್ಬರು ಯೋಜನಾ ವ್ಯವಸ್ಥಾಪಕರು ಸೇರಿದಂತೆ ಮಿಲನ್ ರೋಡ್ ಬಿಲ್ಡ್‌ಟೆಕ್‌ನ ನಾಲ್ವರು ಉದ್ಯೋಗಿಗಳು ಮತ್ತು ಡಿಬಿ ಹಿಲ್ ಎಲ್‌ಬಿಜಿ ಸೂಪರ್‌ವೈಸರಿ ಕಂಪನಿಯ ಓರ್ವ ಉದ್ಯೋಗಿಯನ್ನ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಲುಂಡ್ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೇನ್‌-4 ರ ಸ್ಲ್ಯಾಬ್‌ ಕುಸಿದು ಕೆಳಗೆ ಚಲಿಸುತ್ತಿದ್ದ ಆಟೋ, ಕಾರಿನ ಮೇಲೆ ಬಿದ್ದಿತ್ತು. ವಡಾಲಾ ದಿಂದ ಥಾಣೆಗೆ ಸಂಪರ್ಕಿಸುವ ಮೆಟ್ರೋ ಮಾರ್ಗ ಇದಾಗಿದೆ. ಈ ವೇಳೆ ಮದುವೆ ಕಾರ್ಯಕ್ರಮಕ್ಕೆ ತರಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡ ರಾಮಧನ್ ಯಾದವ್ ಸಾವನ್ನಪ್ಪಿದ್ದರು.

Leave a Reply

Your email address will not be published. Required fields are marked *

error: Content is protected !!