ಉದಯವಾಹಿನಿ, ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತಿಗೆ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರು ಪ್ರತಿದಿನ ಸುಳ್ಳು ಹೇಳುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದಾರೆ ಎಡನು ಟೀಕಿಸಿದರು.
ಇಂದು ಪುದುಚೇರಿಯ ಕಾರೈಕಲ್‌ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ,ಜೋರಾಗಿ ಸುಳ್ಳು ಹೇಳುವುದು ಮತ್ತು ಅದನ್ನು ಪುನರಾವರ್ತಿಸುವುದು ರಾಹುಲ್ ಗಾಂಧಿಯವರ ಪಾಲಿಸಿ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ರೈತರು, ಮೀನುಗಾರರಿಗೆ ಶೇಕಡಾ 100 ರಷ್ಟು ರಕ್ಷಣೆಯನ್ನು ಖಚಿತಪಡಿಸಿದ್ದಾರೆ. ಈ ಮೂಲಕ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಶನಿವಾರ ಪ್ರತಿಪಾದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!