ಉದಯವಾಹಿನಿ ಕುಶಾಲನಗರ ;- ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಅಮರ್ ಜವಾನ್ ಸ್ಮಾರಕಕ್ಕೆ ಪುಪ್ಪಾರ್ಚನೆ ಮಾಡಿ ಸರ್ಕಾರದ ಪರವಾಗಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜು, ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ನಗರಸಭಾಧ್ಯಕ್ಷರಾದ ಅನಿತಾ ಪೂವಯ್ಯ, ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಚಿನ್ನಸ್ವಾಮಿ ಹಲವರು ಅಮರ್ ಜವಾನ್ ಸ್ಮಾರಕಕ್ಕೆ ಧಾರಾಕಾರ ಮಳೆ ನಡುವೇ ಪುಪ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
