ಉದಯವಾಹಿನಿ, ಬೆಂಗಳೂರು: ಕರ್ನಾಟಕದ ನಾಯಕತ್ವ ಬದಲಾವಣೆ ಚರ್ಚೆಯನ್ನು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರು ಬೀದಿನಾಯಿಗೆ ಹೋಲಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಬಾಲವೇ ನಾಯಿಯನ್ನು ಅಲ್ಲಡಿಸಿದರೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಎಲ್ಲಿದೆ? ಹೈಕೋರ್ಟ್ ಬೀದಿ ನಾಯಿಗಳನ್ನೆಲ್ಲ ಪದೇ ಪದೇ ಹಿಡಿದು ಒಳಗೆ ಹಾಕಿ ಎಂದು ಹೇಳುತ್ತಿದೆ. ಇಲ್ಲಿ ರಾಜಕೀಯ ನಾಯಕತ್ವ ಗಟ್ಟಿಯಾಗಿದೆ ಎಂದು ಹೇಳಿದರು.
ಮಾಧ್ಯಮಗಳು ಮರು ಪ್ರಶ್ನೆ ಹಾಕಿದ್ದಕ್ಕೆ, ಹೈಕೋರ್ಟ್ ಹೇಳಿದ್ದನ್ನು ನಾನು ಹೇಳಿದೆ ಅಷ್ಟೇ. ನಾಯಕರು ನಾಯಿಗಳು ಅಂತ ನಾನು ಹೇಳಿದ್ದೀನಾ? ಹೈಕಮಾಂಡ್‌ಗೆ ನಿರ್ದೇಶನ ಕೊಡುವವರು ಯಾರು? ನಾನಾ ನೀವಾ? ಬಾಲವೇ ನಾಯಿಯನ್ನು ಅಲ್ಲಾಡಿಸಿದರೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!