ಉದಯವಾಹಿನಿ, ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅವರು ನಾಗೇಶ್ ಗೌಡ ಎಂಬವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ.
ಯಲ್ಲಪ್ಪ ಅವರು ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ  ಅಧಿಕಾರಿಗಳು, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!