ಉದಯವಾಹಿನಿ, ಅಲ್ವಾರ್ : ರಾಜಸ್ಥಾನದ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಏಳು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಈ ಘಟನೆಯಿಂದ ಕೈಗಾರಿಕಾ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ.
ಮೂಲಗಳ ಪ್ರಕಾರ ಕಾರ್ಖಾನೆಯಲ್ಲಿ ೨೫ ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಸ್ಥಳದಲ್ಲಿಯೇ ೭ ಮಂದಿ ಸಜೀವ ದಹನವಾಗಿದ್ದು ಇನ್ನೂ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ. ಒಳಗೆ ಎಷ್ಟು ಮಂದಿ ಸಿಲುಕಿದ್ದಾರೆ. ಎನ್ನುವುದು ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ಸು ಬೆಂಕಿ ನಂದಿಸುವ ಮತ್ತು ಕಾರ್ಖಾನೆಯಲ್ಲಿ ಸಿಲುಕಿರುವ ಮಂದಿಯ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಹಿತಿ ಪಡೆದ ಕೂಡಲೇ ಅರ್ಧ ಡಜನ್‌ಗೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಉಸ್ತುವಾರಿ ರಾಜು ಖಾನ್ ಹೇಳಿದ್ದಾರೆ. ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದ ಕಾರ್ಡ್‌ಬೋರ್ಡ್ ಸಂಗ್ರಹವಿದ್ದು, ಬೆಂಕಿ ನಂದಿಸುವುದು ಅಗ್ನಿಶಾಮಕ ದಳದವರಿಗೆ ಕಷ್ಟಕರವಾಗಿತ್ತು. ಸುರಕ್ಷತಾ ಕಾರಣಗಳಿಗಾಗಿ, ಹತ್ತಿರದ ಇತರ ಕಾರ್ಖಾನೆಗಳನ್ನು ಸ್ಥಳಾಂತರಿಸಲಾಯಿತು ಮತ್ತು ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸಲಾಯಿತು. ಕೆಲ ಗಂಟೆಗಳ ತೀವ್ರ ಕಾರ್ಯಾಚರಣೆ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!