ಉದಯವಾಹಿನಿ, ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ನಿಯೋಗದಲ್ಲಿದ್ದರು.
ಬಳಿಕ ಮಾತನಾಡಿದ ಡಿಕೆಶಿ, ಹಿಂದೆ ರಾಜ್ಯ ಚುನಾವಣಾ ಆಯೋಗ ವೋಟರ್ ಲಿಸ್ಟ್ ಮಾಡಿತ್ತು. ಒಂದೇ ಮನೆಯಲ್ಲಿನ ಎರಡು ವೋಟನ್ನು ಬೇರೆ ಬೂತ್‌ಗೆ ಹಾಕಿದ್ದಾರೆ. ಮ್ಯಾಪಿಂಗ್ ಸರಿಯಾಗಿ ಆಗ್ತಿಲ್ಲ, ಯಾವುದೇ ರಾಜಕೀಯ ಪಕ್ಷದವರಿದ್ದರೂ ಬಿಎಲ್‌ಓಗಳನ್ನು ಕರೆದುಕೊಂಡು ಹೋಗಬೇಕು. ಸ್ಟ್ರೀಟ್, ಮನೆ, ಮತ ಮ್ಯಾಪಿಂಗ್ ಆಗಬೇಕು. ಈ ದೃಷ್ಟಿಯಿಂದ ಹಿಂದೆ ಲೋಪ ಆಗಿರೋದು ಸರಿ ಆಗಬೇಕು ಎಂದು ಒತ್ತಾಯಿಸಿದರು.
