ಉದಯವಾಹಿನಿ, ನಟಿ ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಂಗಳೂರಿಲ್ಲಿ ನಡೆದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ಈ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ. ಬಳಿಕ Swan.3704722 ಇನ್ಸ್ಟಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡೀಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ವಿಡಿಯೋ ಕಾಲ್ ಮಾಡುವ ಮೂಲಕ ಮೂರ್ನಾಲ್ಕು ಬಾರಿ ಬ್ಲಾಕ್‌ಮೇಲ್‌ ಮಾಡಿದ್ದಾನೆ. ಹಣ ನೀಡದೇ ಹೋದ್ರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಿಟಿ ಸೆನ್ ಪೊಲೀಸ್‌ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!