ಉದಯವಾಹಿನಿ, ಚಿಕ್ಕೋಡಿ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತ ದುರ್ದೈವಿಗಳು. ಮೃತ ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!