ಉದಯವಾಹಿನಿ, ಚಾಮರಾಜನಗರ: ಹುಲಿಗಳ ನಿರಂತರ ದಾಳಿ, ರೈತರ ಆಕ್ರೋಶ ಹಿನ್ನೆಲೆ ಕಳೆದ 3 ತಿಂಗಳಿನಿಂದಲೂ ಕೂಡ ನಾಗರಹೊಳೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಸಫಾರಿಗೆ ಪ್ರವಾಸಿಗರು ನೆರೆರಾಜ್ಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಒಂದೆಡೆ ಸಫಾರಿ ಆರಂಭಕ್ಕೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಸರ್ಕಾರ ಸಫಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಈ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ಕೊಟ್ಟಿದ್ದಾರೆ.
ಮೈಸೂರು, ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಾದ ಬಂಡೀಪುರ ಹಾಗೂ ನಾಗರಹೊಳೆ ವ್ಯಾಪ್ತಿಯಲ್ಲಿ ಮಾನವ ವನ್ಯಪ್ರಾಣಿ ಸಂಘರ್ಷ ಮಿತಿಮೀರಿತ್ತು. ಈ ಹಿನ್ನೆಲೆ ಸಫಾರಿಗೆ ರೈತರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಸಫಾರಿಗಿಂತ ಜೀವಮುಖ್ಯ ಎಂಬುದನ್ನು ಅರಿತ ರಾಜ್ಯ ಸರ್ಕಾರ ಕಳೆದ ವರ್ಷ ನವೆಂಬರ್ 7ರಂದು ಸಫಾರಿ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಅರಣ್ಯಾಧಿಕಾರಿಗಳು ಕಾಡಂಚಿನ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿ, ನಿಗಾ ವಹಿಸಬೇಕು ಅಲ್ಲದೇ ವನ್ಯಜೀವಿ ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮವನ್ನು ರೂಪಿಸಿತು. ಇದೀಗಾ ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿ ಮಾನವ ಸಂಘರ್ಷ ಕಡಿಮೆಯಾಗಿದ್ದು ತಾಂತ್ರಿಕ ಸಮಿತಿ ವರದಿಯ ಮೇರೆಗೆ ಹಂತಹಂತವಾಗಿ ಮರು ಸಫಾರಿ ಆರಂಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮತ್ತೆ ಸಚಿವರ ಆದೇಶದಂತೆ ಸಫಾರಿ ಕೂಡ ಆರಂಭವಾಗಲಿದೆ.

Leave a Reply

Your email address will not be published. Required fields are marked *

error: Content is protected !!