ಉದಯವಾಹಿನಿ, ರಾಯಚೂರು: ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿವರೆಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ಚೇತರಿಸಿಕೊಂಡಿದ್ದಾರೆ. ಯಾದಗಿರಿಯ ಬಂಡೊಳ್ಳಿ ವಾಲ್ಮೀಕಿ ಪೀಠದ ಸ್ಥಳ, ರಾಯಚೂರಿನ ತಿಂಥಣಿ ಕನಕಗುರು ಪೀಠಕ್ಕೆ ಭೇಟಿ ನೀಡಿದ್ದರು. ಬಳಿಕ ಲಿಂಗಸುಗೂರಿನ ಹಟ್ಟಿಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಲಘು ಹೃದಯಾಘಾತವಾಗಿದೆ.
ಬೆಳಗ್ಗೆ ಲವಲವಿಕೆಯಿಂದ ಓಡಾಡಿಕೊಂಡಿದ್ದ ಸ್ವಾಮಿಜಿಗೆ ರಾತ್ರಿವೇಳೆ ಎದೆ ನೋವು ಕಾಣಿಸಿಕೊಂಡಿದೆ. ರಾಯಚೂರಿನಲ್ಲಿ ಆಸ್ಪತ್ರೆಗೆ ದಾಖಲಾದ ವೇಳೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ, ಶಿವರಾಜ್ ಪಾಟೀಲ್ ಮಾಜಿ ಸಂಸದ ಬಿವಿ ನಾಯಕ್ ಆಸ್ಪತ್ರೆಗೆ ತೆರಳಿ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ. ಸ್ವಾಮಿಜಿ ಸದ್ಯ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!