ಉದಯವಾಹಿನಿ, ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗಿಂದು (ಫೆ.19) ಅಸ್ಸಾಂನ ಗುವಾಹಟಿಯಲ್ಲಿರುವ ಪವಿತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾಯಿ ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ ಎಂದು ಪಾರ್ಥಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!