ಉದಯವಾಹಿನಿ, ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ದಾಳಿ ನಡೆದಿದೆ.
ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್‌ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದು, ಹರ್ಮನ್ ಅವರನ್ನು “ಇಂಡಿಯನ್ ಡಾಗ್” (ಭಾರತೀಯ ನಾಯಿ) ಎಂದು ಜನಾಂಗೀಯವಾಗಿ ನಿಂದಿಸಿದ್ದಾರೆ.
ಹರ್ಮನ್ ಅವರ ಮುಖಕ್ಕೆ ತಲೆಗೆ ಜೋರಾಗಿ ಗುದ್ದಿದ್ದು, ಇದ್ರ ಪರಿಣಾಮ ಮೂಗಿನಿಂದ ರಕ್ತಸ್ರಾವವಾಗಿದೆ. ಹೀಗಾಗಿ ಹರ್ಮನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!