ಉದಯವಾಹಿನಿ, ಅಬುಜ: ನೈಜೀರಿಯಾದ ಪ್ಲಾಟ್ಯೂ ರಾಜ್ಯದ ಬಷರ್ ಜಿಲ್ಲೆಯ ಸೀಸದ ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದು ಇತರ 27 ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಗಣಿಯ ಆಳದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಣಿ ಕುಸಿದಿದೆ. ಕನಿಷ್ಠ 38 ಮಂದಿ ಮೃತಪಟ್ಟಿದ್ದು ಗಾಯಗೊಂಡಿದ್ದ 27 ಮಂದಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
