ಉದಯವಾಹಿನಿ, ಹಾಸನ: ಚನ್ನರಾಯಪಟ್ಟಣದ ಕರಿಮಾರನಹಳ್ಳಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ , ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಕೆಲವು ದಿನಗಳಿಂದ ನಾಯಿ, ಕರುಗಳನ್ನು ಹೊತ್ತೊಯ್ದು ಚಿರತೆ ತಿಂದು ಹಾಕಿತ್ತು. ಅಲ್ಲದೇ ಜಮೀನುಗಳಲ್ಲಿ ಹಗಲಿನ ವೇಳೆಯೇ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿಸಿತ್ತು.
ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಪ್ರಭು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನನ್ನು ಇರಿಸಿದ್ದರು. ಅಂದಾಜು ಮೂರುವರೆ ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇದೇ ಗ್ರಾಮದಲ್ಲಿ ಇಲ್ಲಿಯವರೆಗೂ ನಾಲ್ಕು ಚಿರತೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ. ಈ ಭಾಗದಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಉಳಿದ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

 

Leave a Reply

Your email address will not be published. Required fields are marked *

error: Content is protected !!