ಉದಯವಾಹಿನಿ, ಬೆಂಗಳೂರು: ರೋಗಿಗಳಿಗೆ ತೊಂದರೆ ಆಗದಂತೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್‌ಗೆ ಸಮಸ್ಯೆ ಆಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣವನ್ನ ವೈಭವೀಕರಿಸುವ ರೀತಿ ಆಗಿದೆ. 13 ಆಸ್ಪತ್ರೆಗಳಲ್ಲಿ ಇದು ಆಗಿದೆ. 13 ಕಡೆ ಈಗಾಗಲೇ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ.ಪ್ರೊಸೆಸರ್ ಸಮಸ್ಯೆ ಇವತ್ತು ನಿವಾರಣೆ ಆಗುತ್ತದೆ. ಎಂಆರ್‌ಐ, ಸಿಟಿ ಸ್ಕ್ಯಾನ್‌ಗೆ ಅವಕಾಶ ಮಾಡಿಕೊಡುತ್ತಿದ್ದೇವೆ. ಸಾರ್ವಜನಿಕರಿಗೆ ಸಮಸ್ಯೆ ಆಗಲ್ಲ ಎಂದರು.

ಕಂಪನಿಯವರು ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ. 140 ಕೋಟಿ ಕೊಡಿ ಅಂತ ಕೇಳುತ್ತಿದ್ದಾರೆ. ಅದು ಕೊಡಲು ಆಗಲ್ಲ. ನಮ್ಮ ಪ್ರಕಾರ 10-15 ಕೋಟಿ ಕೊಡಬೇಕು ಅಷ್ಟೇ. ನ್ಯಾಯಯುತ ಹಣ ಕೊಡುತ್ತೇವೆ. ವಿಪಕ್ಷಗಳ ನಾಯಕರು ಖಾಸಗಿ ಕಂಪನಿಗೆ ಎಷ್ಟು ಬೇಕಾದರೂ ಹಣ ಕೊಡಿ ಅಂತ ಹೇಳೋದು ಸರಿಯಲ್ಲ. ಅಶೋಕ್ ಯಾರ ಪರ ಇದ್ದಾರೆ. ಬಿಜೆಪಿ-ಜೆಡಿಎಸ್ ಯಾರ ಪರ ಇದ್ದಾರೆ ಅಂತ ತಿಳಿಸಲಿ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!